ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 30 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಜೂನ್ 2027
ಬುಧವಾರ · ಸಾಮಾನ್ಯ ಕಾಲದ 13ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 13ನೇ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ರೋಮಿನ ಪವಿತ್ರ ಧರ್ಮಸಭೆಯ ಮೊದಲ ಹುತಾತ್ಮರು · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
5ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು. 8ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. 9ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು, 10ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. 11ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. 12ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು; 13ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು. 14ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. 15ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ, 16ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು. 17ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; 18ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. 19ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. 20ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
ಪ್ರತಿವಚನ ಕೀರ್ತನೆ
6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 7ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 9ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. 10ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. 11ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. 12ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
ಸುವಾರ್ತೆ
28ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. 29ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು. 30ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. 31ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು. 32ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು. 33ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು; 34ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಇಂದಿನ ಸಂತರು
- ರೋಮಿನ ಪವಿತ್ರ ಧರ್ಮಸಭೆಯ ಮೊದಲ ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು