ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 30 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಜೂನ್ 2027
ಬುಧವಾರ · ಪಂಚಾಶತ್ತಮದ ನಂತರದ ಎರಡನೆಯ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Holy Martyrs Manuel, Sabel and Ismael of Persia († 362)
ಅಪೊಸ್ತಲರ ಉಪವಾಸ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ. 14ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು. 15ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ. 16ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ. 17“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು. 18“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು. 19ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. 20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. 21ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು. 22ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. 23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು. 24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು. 25ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.
ಸುವಾರ್ತೆ
21“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. 22ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. 23ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಜೂನ್ ಎಂದರೆ ನಾಗರಿಕ ಪಂಚಾಂಗದ 30 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು