ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 2 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 19 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಜುಲೈ 2027
ಶುಕ್ರವಾರ · ಪಂಚಾಶತ್ತಮದ ನಂತರದ ಎರಡನೆಯ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Holy Apostle Jude, the Brother of the Lord († c. 80)
ಅಪೊಸ್ತಲರ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
1ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ, 2ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ. 3ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. 4ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. 5ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. 6ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. 7ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. 8ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ. 9ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ಸಂಧ್ಯಾ ಪ್ರಾರ್ಥನೆ: ವಾಚನ
11ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ. 12ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು. 13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. 14ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು, 15ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು. 16ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
ಸಂಧ್ಯಾ ಪ್ರಾರ್ಥನೆ: ವಾಚನ
17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. 18“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು. 19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ. 20ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ. 21ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. 22ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ, 23ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. 24ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ, 25ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.
ಉದಯಕಾಲದ ಪ್ರಾರ್ಥನೆ: ಸುವಾರ್ತೆ
15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಪತ್ರಿಕೆ
17ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. 18ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು. 19ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. 20ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. 21ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. 6:1ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. 2ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
ಪತ್ರಿಕೆ (ಸಂತ ಯೂದ)
1ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ, 2ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ. 3ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. 4ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. 5ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. 6ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. 7ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. 8ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ. 9ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ಸುವಾರ್ತೆ
14ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, 15“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ 16ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು. 17ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
ಸುವಾರ್ತೆ (ಸಂತ ಯೂದ)
21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. 22ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. 23ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. 24ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಜೂನ್ ಎಂದರೆ ನಾಗರಿಕ ಪಂಚಾಂಗದ 2 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು