ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 3 ಜುಲೈ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಜುಲೈ 2027
ಶನಿವಾರ · ಸಾಮಾನ್ಯ ಕಾಲದ 13ನೇ ವಾರ
ಹಬ್ಬಗಳು ಮತ್ತು ಸಂತರು
ಸಂತ ತೋಮ, ಅಪೊಸ್ತಲ
ಹಬ್ಬ · ಆರಾಧನಾ ಬಣ್ಣ: ಕೆಂಪು
ದಿನದ ವಾಚನಗಳು
ಮೊದಲನೆಯ ವಾಚನ
19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. 21ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
ಪ್ರತಿವಚನ ಕೀರ್ತನೆ
1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!
ಸುವಾರ್ತೆ
24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
ಇಂದಿನ ಸಂತರು
- ಸಂತ ತೋಮ, ಅಪೊಸ್ತಲ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು