ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 3 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಜುಲೈ 2027
ಶನಿವಾರ · ಪಂಚಾಶತ್ತಮದ ನಂತರದ ಎರಡನೆಯ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Saint John, Archbishop of Shanghai and San Francisco, the Wonderworker († 1966)
ಅಪೊಸ್ತಲರ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
19ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು. 20ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ. 21ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. 22ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. 23ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. 24ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. 25ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು. 26ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
ಸುವಾರ್ತೆ
1“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. 2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. 3“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ? 4ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ. 5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು. 6“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. 7“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; 8ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಜೂನ್ ಎಂದರೆ ನಾಗರಿಕ ಪಂಚಾಂಗದ 3 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು