ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 5 ಜುಲೈ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಜುಲೈ 2027
ಸೋಮವಾರ · ಸಾಮಾನ್ಯ ಕಾಲದ 14ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 14ನೇ ವಾರದ ಸೋಮವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಅಂತೋನಿ ಜಕ್ಕಾರಿಯಾ, ಧರ್ಮಗುರು · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
10ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. 11ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. 12ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. 13ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು. 14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು. 15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. 16ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. 17ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. 18ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು. 19ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು. 20ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು, 21ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು. 22ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
ಪ್ರತಿವಚನ ಕೀರ್ತನೆ
1ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. 2ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು. 3ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. 4ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ. 14ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು. 15ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
ಸುವಾರ್ತೆ
18ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು. 19ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು. 20ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, 21“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. 22ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು. 23ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, 24“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. 25ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು. 26ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
ಇಂದಿನ ಸಂತರು
- ಸಂತ ಅಂತೋನಿ ಜಕ್ಕಾರಿಯಾ, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು