Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 5 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜೂನ್ 22 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಜುಲೈ 2027

ಸೋಮವಾರ · ಪಂಚಾಶತ್ತಮದ ನಂತರದ ಮೂರನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Hieromartyr Eusebius, Bishop of Samosata († 380)

ಅಪೊಸ್ತಲರ ಉಪವಾಸ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 7:1–13

1ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ? 2ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ. 3ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ. 4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ. 5ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು. 6ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ. 7ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ. 8ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ. 9ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು. 10ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು. 11ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು. 12ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ. 13ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.

ಸುವಾರ್ತೆ

ಮತ್ತಾ 9:36–10:8

36ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು. 37ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ. 38ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು. 10:1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 2ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ, 3ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ, 4ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ. 5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ; 6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಜೂನ್ ಎಂದರೆ ನಾಗರಿಕ ಪಂಚಾಂಗದ 5 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು