Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 6 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜೂನ್ 23 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಜುಲೈ 2027

ಮಂಗಳವಾರ · ಪಂಚಾಶತ್ತಮದ ನಂತರದ ಮೂರನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Martyr Agrippina of Rome († c. 255)

ಅಪೊಸ್ತಲರ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಪ್ರಾರ್ಥನೆ: ಸುವಾರ್ತೆ (ದೇವಮಾತೆಯ ವ್ಲಾದಿಮಿರ್ ಐಕಾನ್)

ಲೂಕ 1:39–49, 56

39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.

ಪತ್ರಿಕೆ

ರೋಮಾ 7:14–8:2

14ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. 15ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ. 16ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. 17ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ. 18ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. 19ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. 20ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. 21ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ. 22ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. 23ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. 24ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? 25ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ. 8:1ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, 2ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.

ಪತ್ರಿಕೆ (ಬುಧವಾರಕ್ಕೆ)

ರೋಮಾ 8:2–13

2ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು. 3ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. 4ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು. 5ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. 6ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. 7ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. 8ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು. 9ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ. 10ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ. 11ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು. 12ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ. 13ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.

ಪತ್ರಿಕೆ (ದೇವಮಾತೆಯ ವ್ಲಾದಿಮಿರ್ ಐಕಾನ್)

ಫಿಲಿಪ್ಪಿ 2:5–11

5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಸುವಾರ್ತೆ

ಮತ್ತಾ 10:9–15

9ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ, 10ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. 11ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ. 12ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ. 13ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ. 14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. 15ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಸುವಾರ್ತೆ (ಬುಧವಾರಕ್ಕೆ)

ಮತ್ತಾ 10:16–22

16“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ. 17ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. 18ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. 19ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. 20ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು. 21ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.

ಸುವಾರ್ತೆ (ದೇವಮಾತೆಯ ವ್ಲಾದಿಮಿರ್ ಐಕಾನ್)

ಲೂಕ 10:38–42; 11:27–28

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಜೂನ್ ಎಂದರೆ ನಾಗರಿಕ ಪಂಚಾಂಗದ 6 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು