ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 7 ಜುಲೈ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಜುಲೈ 2027
ಬುಧವಾರ · ಸಾಮಾನ್ಯ ಕಾಲದ 14ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 14ನೇ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
55ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. 56ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು. 57ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. 42:5ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು. 6ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು. 7ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು. 17ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು. 18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ. 19ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ. 20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು. 21ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು. 22ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು. 23ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ. 24ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
ಪ್ರತಿವಚನ ಕೀರ್ತನೆ
2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 3ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. 10ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. 11ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
ಸುವಾರ್ತೆ
1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 2ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ, 3ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ, 4ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ. 5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ; 6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು