ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 7 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಜುಲೈ 2027
ಬುಧವಾರ · ಪಂಚಾಶತ್ತಮದ ನಂತರದ ಮೂರನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Nativity of the Holy Glorious Prophet, Forerunner, and Baptist of the Lord, John
ಅಪೊಸ್ತಲರ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಆದಿ 17:15–17, 19; 18:11–14; 21:1–8
15ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. 16ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. 17ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. 19ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. 18:11ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. 12ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. 13ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? 14ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು. 21:1ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು. 2ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು. 3ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು. 4ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು. 5ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು. 6ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು. 7ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. 8ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
ಸಂಧ್ಯಾ ಪ್ರಾರ್ಥನೆ: ವಾಚನ
ನ್ಯಾಯ 13:2–8, 13–14, 17–18, 21
2ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ. 3ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ. 4ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು. 5ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು. 6ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ. 7ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು. 8ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು. 13ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ. 14ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು. 17ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು. 18ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು. 21ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು
ಉದಯಕಾಲದ ಪ್ರಾರ್ಥನೆ: ಸುವಾರ್ತೆ
24ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. 25“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು. 57ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು. 58ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು. 59ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. 60ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು, 61ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು. 62ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು. 63ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. 64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು. 65ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. 66ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. 67ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ, 68“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; 76ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ, 80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.
ಪತ್ರಿಕೆ (ಮುಂದೂತ)
11ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. 12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ. 13ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. 14ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. 14:1ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. 2ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. 3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? 4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
ಸುವಾರ್ತೆ (ಮುಂದೂತ)
1ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ. 2ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು, 3ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು. 4ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು. 5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್. 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು. 7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. 8ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು. 9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. 10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ, 11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. 12ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. 13ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. 16ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. 18ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. 19ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. 20ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. 21ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. 22ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. 23ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು. 24ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. 25“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು. 57ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು. 58ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು. 59ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. 60ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು, 61ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು. 62ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು. 63ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. 64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು. 65ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. 66ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. 67ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ, 68“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; 76ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ, 80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಜೂನ್ ಎಂದರೆ ನಾಗರಿಕ ಪಂಚಾಂಗದ 7 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು