Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 8 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಜುಲೈ 2027

ಗುರುವಾರ · ಸಾಮಾನ್ಯ ಕಾಲದ 14ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 14ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 44:18–21, 23–29; 45:1–5

18ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ. 19ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು, 20ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು. 21“ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು, 23ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ. 24ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು. 25“ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ, 26ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು. 27ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ. 28ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ. 29ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. 45:1ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ. 2ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು. 3ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು. 4ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ. 5ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಪ್ರತಿವಚನ ಕೀರ್ತನೆ

ಕೀರ್ತ 105:16–21

16ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು. 17ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. 18ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು. 19ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು. 20ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು. 21ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.

ಸುವಾರ್ತೆ

ಮತ್ತಾ 10:7–15

7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ. 9ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ, 10ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. 11ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ. 12ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ. 13ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ. 14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. 15ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು