ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 8 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 25 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಜುಲೈ 2027
ಗುರುವಾರ · ಪಂಚಾಶತ್ತಮದ ನಂತರದ ಮೂರನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Virginmartyr Febronia of Nisibis († c. 304)
ಅಪೊಸ್ತಲರ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
22ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ 23ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ. 24ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? 25ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ. 26ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. 27ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
ಸುವಾರ್ತೆ
23ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 24“ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ. 25ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು? 26ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ. 27ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ. 28ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. 29ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು. 30ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. 31ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 25 ಜೂನ್ ಎಂದರೆ ನಾಗರಿಕ ಪಂಚಾಂಗದ 8 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು