Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 9 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಜುಲೈ 2027

ಶುಕ್ರವಾರ · ಸಾಮಾನ್ಯ ಕಾಲದ 14ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 14ನೇ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಅಗಸ್ಟೀನ್ ಜಾವೊ ರೊಂಗ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 46:1–7, 28–30

1ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು. 2ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು. 3ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು. 4ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು. 5ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು. 6ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು. 7ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. 28ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ, 29ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು. 30ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು.

ಪ್ರತಿವಚನ ಕೀರ್ತನೆ

ಕೀರ್ತ 37:3–4, 18–19, 27–28, 39–40

3ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. 4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. 18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. 19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. 27ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. 28ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. 39ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. 40ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಸುವಾರ್ತೆ

ಮತ್ತಾ 10:16–23

16“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ. 17ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. 18ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. 19ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. 20ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು. 21ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು. 23ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು