Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 9 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜೂನ್ 26 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಜುಲೈ 2027

ಶುಕ್ರವಾರ · ಪಂಚಾಶತ್ತಮದ ನಂತರದ ಮೂರನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Venerable David of Thessalonica (6th C)

ಅಪೊಸ್ತಲರ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 9:6–19

6ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ. 7ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು. 8ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು. 9“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ. 10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು. 11ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ. 13ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ. 14ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ. 15“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ. 16ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ. 17ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ. 18ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. 19“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.

ಸುವಾರ್ತೆ

ಮತ್ತಾ 10:32–36; 11:1

32“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. 33ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. 34“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು. 35ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು. 36ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು. 11:1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಜೂನ್ ಎಂದರೆ ನಾಗರಿಕ ಪಂಚಾಂಗದ 9 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು