ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 10 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಜುಲೈ 2027
ಶನಿವಾರ · ಪಂಚಾಶತ್ತಮದ ನಂತರದ ಮೂರನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
St. Joanna the Myrrhbearer (1st C)
ಅಪೊಸ್ತಲರ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
28ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ 29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ. 30ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ. 31ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ. 4:1ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು? 2ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ. 3ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
ಸುವಾರ್ತೆ
24“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು. 25ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. 26ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. 27ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು. 28“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 29ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು. 8:1“ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು. 2ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು. 3ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು. 4ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಜೂನ್ ಎಂದರೆ ನಾಗರಿಕ ಪಂಚಾಂಗದ 10 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು