ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 11 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಜುಲೈ 2027
ಭಾನುವಾರ · ಸ್ವರ 2
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ ಮೂರನೆಯ ಭಾನುವಾರ
ಅಪೊಸ್ತಲರ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಮೂರನೆಯ ಸುವಾರ್ತೆ
9ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. 12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. 14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. 19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
ಪತ್ರಿಕೆ
1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು. 2ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. 3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. 4ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. 5ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. 6ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. 7ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. 8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. 9ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? 10ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಸುವಾರ್ತೆ
22“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು. 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು! 24“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ. 25“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. 26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? 27ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು? 28ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ; 29ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. 30ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! 31ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. 32ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. 33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಜೂನ್ ಎಂದರೆ ನಾಗರಿಕ ಪಂಚಾಂಗದ 11 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು