ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 12 ಜುಲೈ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಜುಲೈ 2027
ಸೋಮವಾರ · ಸಾಮಾನ್ಯ ಕಾಲದ 15ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 15ನೇ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
8ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು. 9ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ. 10ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ 11ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು. 12ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು. 13ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು. 14ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು. 22ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಸುವಾರ್ತೆ
34“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು. 35ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು. 36ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು. 37ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. 38ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. 39ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 40“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ. 41ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು. 42ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. 11:1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು