ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 13 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜೂನ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಜುಲೈ 2027
ಮಂಗಳವಾರ · ಪಂಚಾಶತ್ತಮದ ನಂತರದ ನಾಲ್ಕನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Synaxis of the Twelve Glorious and All-Praised Apostles: Peter and Andrew, James and John, Phillip, Bartholomew, Thomas, Matthew, James the son of Alpheus, Jude [Thaddeus], Simon Zealotes, and Matthias
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಸೋಮವಾರಕ್ಕೆ)
18ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. 19“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ. 20ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ? 21ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? 22ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ. 23ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ. 24ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು. 25ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. 26ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ. 27ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ. 28ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ, 29“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ. 30ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು. 31ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು. 32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ, 33ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.
ಪತ್ರಿಕೆ
11“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. 12ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. 13ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ. 14ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? 15ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ. 16ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ. 17ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ. 18ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.” 19ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ. 20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. 21ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ. 11:1ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ. 2ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
ಪತ್ರಿಕೆ (ಅಪೊಸ್ತಲರು)
9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. 10ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ, 12ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಸುವಾರ್ತೆ (ಸೋಮವಾರಕ್ಕೆ)
2ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ, 3“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು. 4ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; 5ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. 6ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. 7ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 8ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. 9ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ. 10‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. 11ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. 13ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. 14ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. 15ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
ಸುವಾರ್ತೆ
16ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, 17‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ. 18ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ. 19ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. 20ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
ಸುವಾರ್ತೆ (ಅಪೊಸ್ತಲರು)
13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, 15ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು. 16ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು. 17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು. 18ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, 19ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಜೂನ್ ಎಂದರೆ ನಾಗರಿಕ ಪಂಚಾಂಗದ 13 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು