ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 14 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 1 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಜುಲೈ 2027
ಬುಧವಾರ · ಪಂಚಾಶತ್ತಮದ ನಂತರದ ನಾಲ್ಕನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Holy Unmercenaries Cosmas and Damian, Martyrs at Rome († 284)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
2ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ? 3ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ. 4ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ. 5ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ. 6ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ. 7ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು. 8“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು. 9ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ; 10ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ. 11ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ. 12ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
ಪತ್ರಿಕೆ (ಸಂತರಾದ ಕೊಸ್ಮಸ್ ಮತ್ತು ದಮಿಯಾನ್)
27ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. 28ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. 29ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? 30ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ? 31ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ. 13:1ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. 2ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. 3ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. 4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. 5ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. 6ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. 7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. 8ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
ಸುವಾರ್ತೆ
20ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. 21ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. 22ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. 23ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. 24ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು. 25ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. 26ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
ಸುವಾರ್ತೆ (ಸಂತರಾದ ಕೊಸ್ಮಸ್ ಮತ್ತು ದಮಿಯಾನ್)
1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ; 6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಜುಲೈ ಎಂದರೆ ನಾಗರಿಕ ಪಂಚಾಂಗದ 14 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು