Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 15 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಜುಲೈ 2027

ಗುರುವಾರ · ಸಾಮಾನ್ಯ ಕಾಲದ 15ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 15ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಬೊನವೆಂಚರ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ವಿಮೋ 3:13–20

13ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು. 14ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು. 15ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ. 16ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ. 17ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು. 18ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ. 19ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ. 20ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.

ಪ್ರತಿವಚನ ಕೀರ್ತನೆ

ಕೀರ್ತ 105:1, 5, 8–9, 24–27

1ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. 5ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು, 8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು. 24ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. 25ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು. 26ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. 27ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.

ಸುವಾರ್ತೆ

ಮತ್ತಾ 11:28–30

28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು