Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 15 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜುಲೈ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಜುಲೈ 2027

ಗುರುವಾರ · ಪಂಚಾಶತ್ತಮದ ನಂತರದ ನಾಲ್ಕನೆಯ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Placing of the Honorable Robe of the Most Holy Mother of God at Blachernæ (5th C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 11:13–24

13ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ. 14ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು. 15ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ. 16ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ. 17ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ. 18ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ. 19ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು. 20ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ. 21ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ. 22ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು. 23ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ. 24ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.

ಸುವಾರ್ತೆ

ಮತ್ತಾ 11:27–30

27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಜುಲೈ ಎಂದರೆ ನಾಗರಿಕ ಪಂಚಾಂಗದ 15 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು