ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 16 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಜುಲೈ 2027
ಶುಕ್ರವಾರ · ಪಂಚಾಶತ್ತಮದ ನಂತರದ ನಾಲ್ಕನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Martyr Hyacinth of Cæsarea in Cappadocia († 108)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು. 26ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು. 27ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ. 28ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ. 29ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ. 30ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ, 31ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು. 32ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. 33ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ. 34“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು? 35ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?” 36ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
ಸುವಾರ್ತೆ
1ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. 2ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು. 3ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? 4ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ. 5ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ? 6ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ. 7‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ. 8ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಜುಲೈ ಎಂದರೆ ನಾಗರಿಕ ಪಂಚಾಂಗದ 16 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು