Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 17 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಜುಲೈ 2027

ಶನಿವಾರ · ಸಾಮಾನ್ಯ ಕಾಲದ 15ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 15ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ವಿಮೋ 12:37–42

37ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು. 38ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು. 39ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ. 40ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು. 41ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು. 42ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.

ಪ್ರತಿವಚನ ಕೀರ್ತನೆ

ಕೀರ್ತ 136:1, 23–24, 10–15

1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು. 23ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು. 24ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 10ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 11ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು. 12ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 13ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 14ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 15ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

ಸುವಾರ್ತೆ

ಮತ್ತಾ 12:14–21

14ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು. 15ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು. 16ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. 17ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ, 18“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು. 19ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ. 20ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು. 21ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು