ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 17 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಜುಲೈ 2027
ಶನಿವಾರ · ಪಂಚಾಶತ್ತಮದ ನಂತರದ ನಾಲ್ಕನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Saint Andrew, Archbishop of Crete († 712-726)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
11ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. 12ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. 13ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. 14ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. 15ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. 16ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ 17ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
ಸುವಾರ್ತೆ
14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ 15ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು. 16ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು. 17ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು. 18ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು. 19ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, 20ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. 21ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ, 22ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು. 23ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಜುಲೈ ಎಂದರೆ ನಾಗರಿಕ ಪಂಚಾಂಗದ 17 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು