Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 18 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜುಲೈ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಜುಲೈ 2027

ಭಾನುವಾರ · ಸ್ವರ 3

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ ನಾಲ್ಕನೆಯ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಅಥನಾಸಿಯಸ್)

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಅಥನಾಸಿಯಸ್)

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಅಥನಾಸಿಯಸ್)

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಸೆರ್ಗಿಯಸ್)

ಜ್ಞಾನೋ 10; ಜ್ಞಾನೋ 3; ಜ್ಞಾನೋ 8 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಸೆರ್ಗಿಯಸ್)

ಜ್ಞಾನೋ 10:31–11:12

31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. 32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. 11:1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. 2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ. 3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ. 4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ. 5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು. 6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು. 7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. 8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು. 9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು. 10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು. 12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಸೆರ್ಗಿಯಸ್)

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ನಾಲ್ಕನೆಯ ಸುವಾರ್ತೆ

ಲೂಕ 24:1–12

1ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. 2ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು, 3ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ. 4ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು. 5ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? 6ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು. 8ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು, 9ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು. 10ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು. 11ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು. 12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.

ಪತ್ರಿಕೆ

ರೋಮಾ 6:18–23

18ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. 19ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. 20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. 21ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? 22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. 23ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಪತ್ರಿಕೆ (ಇಬ್ಬರಲ್ಲಿ ಯಾವುದೇ ಸಂತ)

ಗಲಾ 5:22–6:2

22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.

ಸುವಾರ್ತೆ

ಮತ್ತಾ 8:5–13

5ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು, 6“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು. 7ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, 8ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 9ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು. 10ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. 11ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು; 12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು. 13ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.

ಸುವಾರ್ತೆ (ಇಬ್ಬರಲ್ಲಿ ಯಾವುದೇ ಸಂತ)

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಜುಲೈ ಎಂದರೆ ನಾಗರಿಕ ಪಂಚಾಂಗದ 18 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು