ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 19 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 6 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಜುಲೈ 2027
ಸೋಮವಾರ · ಪಂಚಾಶತ್ತಮದ ನಂತರದ ಐದನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Venerable Sisoes the Great († 429)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
4ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ 5ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ. 15ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ. 16ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. 17ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ. 18ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. 19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ. 20ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”. 21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ಸುವಾರ್ತೆ
9ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು. 10ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು. 11ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ? 12ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು. 13ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಜುಲೈ ಎಂದರೆ ನಾಗರಿಕ ಪಂಚಾಂಗದ 19 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು