Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 21 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಜುಲೈ 2027

ಬುಧವಾರ · ಸಾಮಾನ್ಯ ಕಾಲದ 16ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 16ನೇ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಬ್ರಿಂಡಿಸಿಯ ಸಂತ ಲಾರೆನ್ಸ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ವಿಮೋ 16:1–5, 9–15

1ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು. 2ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು. 3ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು. 4ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ. 5ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು. 9ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು. 10ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. 11ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 12“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ. 13ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. 14ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. 15ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.

ಪ್ರತಿವಚನ ಕೀರ್ತನೆ

ಕೀರ್ತ 78:18–19, 23–28

18ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು. 19ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? 23ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು, 24ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು. 25ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು. 26ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು, 27ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. 28ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.

ಸುವಾರ್ತೆ

ಮತ್ತಾ 13:1–9

1ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು. 2ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು. 3ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. 4“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. 5ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು. 6ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. 7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು. 9ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು