ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 22 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 9 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಜುಲೈ 2027
ಗುರುವಾರ · ಪಂಚಾಶತ್ತಮದ ನಂತರದ ಐದನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Hieromartyr Pancratios, Bishop of Taoromina in Sicily (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
17ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು 18ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. 19ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ. 20ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು. 21“ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ. 22ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು. 23ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ 24ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ. 25ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. 26ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ. 27ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ. 28ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು. 29ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.
ಸುವಾರ್ತೆ
46ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು. 47ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು. 48ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ 49ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು. 50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು. 13:1ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು. 2ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು. 3ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಜುಲೈ ಎಂದರೆ ನಾಗರಿಕ ಪಂಚಾಂಗದ 22 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು