ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 23 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 10 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಜುಲೈ 2027
ಶುಕ್ರವಾರ · ಪಂಚಾಶತ್ತಮದ ನಂತರದ ಐದನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Holy 45 Martyrs at Nicopolis in Armenia († c. a 319): Leontius, Mauricius, Daniel, Anthony, Alexander, Meneus, Janicita, Sisinius, Biriladus, and others
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಪತ್ರಿಕೆ
1ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ; 2ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು. 3ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. 4ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ. 5ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ. 6ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. 7ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು. 8ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ. 9ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. 10ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. 11ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು. 12ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ. 13ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು. 14ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು. 15ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು. 16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.
ಪತ್ರಿಕೆ (ಸಂತ ಅಂತೋನಿ)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಸುವಾರ್ತೆ
3ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. 4“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. 5ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು. 6ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. 7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು. 9ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
ಸುವಾರ್ತೆ (ಸಂತ ಅಂತೋನಿ)
25ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. 5:1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, 3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. 4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. 6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. 7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. 8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಜುಲೈ ಎಂದರೆ ನಾಗರಿಕ ಪಂಚಾಂಗದ 23 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು