Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 24 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಜುಲೈ 2027

ಶನಿವಾರ · ಸಾಮಾನ್ಯ ಕಾಲದ 16ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 16ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಶರ್ಬೆಲ್ ಮಖ್ಲೂಫ್, ಧರ್ಮಗುರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ವಿಮೋ 24:3–8

3ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು. 4ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು. 5ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು. 6ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು. 7ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು. 8ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.

ಪ್ರತಿವಚನ ಕೀರ್ತನೆ

ಕೀರ್ತ 50:1–2, 5–6, 14–15

1ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. 2ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ. 5“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. 6ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ 14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. 15ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಸುವಾರ್ತೆ

ಮತ್ತಾ 13:24–30

24ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. 25ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. 26ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. 27ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು. 28ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು. 29ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. 30ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು