ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 24 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಜುಲೈ 2027
ಶನಿವಾರ · ಪಂಚಾಶತ್ತಮದ ನಂತರದ ಐದನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Remembrance of the Miracle of Saint Euphemia the All-Praiseworthy
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
14ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. 15ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. 16ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. 17ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. 18ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ. 19ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ. 20ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, 21ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
ಸುವಾರ್ತೆ
9ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. 10ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. 11ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 12ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು. 13ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಜುಲೈ ಎಂದರೆ ನಾಗರಿಕ ಪಂಚಾಂಗದ 24 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು