Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 26 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜುಲೈ 13 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಜುಲೈ 2027

ಸೋಮವಾರ · ಪಂಚಾಶತ್ತಮದ ನಂತರದ ಆರನೆಯ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Synaxis of the Archangel Gabriel

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 16:17–24

17ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 18ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. 19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. 20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. 21ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. 23ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. 24ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್.

ಸುವಾರ್ತೆ

ಮತ್ತಾ 13:10–23

10ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು. 11ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ. 12ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. 13ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. 14“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. 15ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ. 16“ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ. 17ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. 18“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ. 19ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. 20ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, 21ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. 22ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. 23ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಜುಲೈ ಎಂದರೆ ನಾಗರಿಕ ಪಂಚಾಂಗದ 26 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು