Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 30 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಜುಲೈ 2027

ಶುಕ್ರವಾರ · ಸಾಮಾನ್ಯ ಕಾಲದ 17ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 17ನೇ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಪೀಟರ್ ಕ್ರಿಸೊಲೊಗಸ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಯಾಜ 23:1, 4–11, 15–16, 27, 34–38

1ಯೆಹೋವನು ಮೋಶೆಯೊಂದಿಗೆ ಮಾತನಾಡಿ, 4“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು. 5“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು. 6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. 7ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 8ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು. 9ಯೆಹೋವನು ಮೋಶೆಯೊಂದಿಗೆ ಮಾತನಾಡಿ, 10“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. 11ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು. 15“‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. 16ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು. 27“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು. 34“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. 35ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು. 36ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು. 37“‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. 38ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.

ಪ್ರತಿವಚನ ಕೀರ್ತನೆ

ಕೀರ್ತ 81:2–5, 9–10

2ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ. 3ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. 4ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು. 5ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ, 9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು; 10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

ಸುವಾರ್ತೆ

ಮತ್ತಾ 13:54–58

54ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು? 55ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ? 56ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು. 57ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು. 58ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು