ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 30 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಜುಲೈ 2027
ಶುಕ್ರವಾರ · ಪಂಚಾಶತ್ತಮದ ನಂತರದ ಆರನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Great Martyr Marina (Margaret) of Antioch in Pisidia (4th C)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
5ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು. 6ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ. 7ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ? 8ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.
ಸುವಾರ್ತೆ
44“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. 45ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. 46ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. 47“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. 48ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. 49ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. 50ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. 51“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು. 52ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು. 53ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು. 54ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಜುಲೈ ಎಂದರೆ ನಾಗರಿಕ ಪಂಚಾಂಗದ 30 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು