Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 31 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜುಲೈ 18 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಜುಲೈ 2027

ಶನಿವಾರ · ಪಂಚಾಶತ್ತಮದ ನಂತರದ ಆರನೆಯ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Martyr Hyacinth of Amastris (4th c.)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 9:1–5

1ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ. 2ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. 3ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. 4ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು. 5ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

ಸುವಾರ್ತೆ

ಮತ್ತಾ 9:18–26

18ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು. 19ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು. 20ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, 21“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. 22ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು. 23ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, 24“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. 25ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು. 26ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಜುಲೈ ಎಂದರೆ ನಾಗರಿಕ ಪಂಚಾಂಗದ 31 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು