Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 2 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಆಗಸ್ಟ್ 2027

ಸೋಮವಾರ · ಸಾಮಾನ್ಯ ಕಾಲದ 18ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 18ನೇ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ವೆರ್ಚೆಲ್ಲಿಯ ಸಂತ ಯುಸೇಬಿಯಸ್, ಧರ್ಮಾಧ್ಯಕ್ಷ · ಐಚ್ಛಿಕ ಸ್ಮರಣೆ

ಸಂತ ಪೀಟರ್ ಜೂಲಿಯನ್ ಐಮಾರ್, ಧರ್ಮಗುರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಅರಣ್ಯ 11:4–15

4ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು? 5ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ. 6ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು. 7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು. 8ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು. 9ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು. 10ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು. 11ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? 12ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ? 13ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು? 14ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ. 15ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

ಪ್ರತಿವಚನ ಕೀರ್ತನೆ

ಕೀರ್ತ 81:11–16

11ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. 12ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. 13ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! 14ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. 15ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. 16ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.

ಸುವಾರ್ತೆ

ಮತ್ತಾ 14:13–21

13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು. 14ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. 15ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು. 16ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು. 17ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ, 18ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು. 19ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. 20ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. 21ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು