ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 3 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಜುಲೈ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಆಗಸ್ಟ್ 2027
ಮಂಗಳವಾರ · ಪಂಚಾಶತ್ತಮದ ನಂತರದ ಏಳನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Prophet Ezekiel (6th C BC)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ. 7:1ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು; 2ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ. 3ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ 4ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು. 5ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ. 6ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ. 7ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ. 8ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು. 9ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ. 10ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. 11ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು. 12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.
ಸುವಾರ್ತೆ
1ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ, 2ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು. 3ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. 4ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು. 5ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. 6ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. 7ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. 8ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು. 9ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು. 10ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, 11ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. 12ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. 13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಜುಲೈ ಎಂದರೆ ನಾಗರಿಕ ಪಂಚಾಂಗದ 3 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು