Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 4 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಆಗಸ್ಟ್ 2027

ಬುಧವಾರ · ಸಾಮಾನ್ಯ ಕಾಲದ 18ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 18ನೇ ವಾರದ ಬುಧವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಜಾನ್ ವಿಯಾನಿ (ಆರ್ಸ್‌ನ ಧರ್ಮಗುರು), ಧರ್ಮಗುರು · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಅರಣ್ಯ 13:1–2, 25–14:1, 26–30, 34–35

1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು. 25ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು. 26ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು. 27ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು. 28ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು. 29ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು. 30ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು. 31ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು. 32ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು. 33ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು. 14:1ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು. 26ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, 27“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು. 28ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. 29ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು. 30ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ. 34ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು. 35ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.

ಪ್ರತಿವಚನ ಕೀರ್ತನೆ

ಕೀರ್ತ 106:6–7, 13–14, 21–23

6ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು. 7ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು. 13ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ, 14ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು. 21ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ, 22ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು. 23ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಸುವಾರ್ತೆ

ಮತ್ತಾ 15:21–28

21ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು. 22ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು. 23ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು. 24ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು. 25ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು. 26ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. 27ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು. 28ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು