ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 5 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಜುಲೈ 23 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಆಗಸ್ಟ್ 2027
ಗುರುವಾರ · ಪಂಚಾಶತ್ತಮದ ನಂತರದ ಏಳನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Martyrs Trophymos, Theophilos and 13 others in Lycia (4th C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
24ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ. 25ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ. 26ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ. 27ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ. 28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ. 29ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, 30ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ, 31ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ. 32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. 33ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ. 34ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. 35ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.
ಸುವಾರ್ತೆ
12ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು. 13ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. 14ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು. 15ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು, 16ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ? 17ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ? 18ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು. 19ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ. 20ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು. 21ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಜುಲೈ ಎಂದರೆ ನಾಗರಿಕ ಪಂಚಾಂಗದ 5 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು