ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 6 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಆಗಸ್ಟ್ 2027
ಶುಕ್ರವಾರ · ಸಾಮಾನ್ಯ ಕಾಲದ 18ನೇ ವಾರ
ಹಬ್ಬಗಳು ಮತ್ತು ಸಂತರು
ಕರ್ತನ ರೂಪಾಂತರ
ಹಬ್ಬ · ಆರಾಧನಾ ಬಣ್ಣ: ಬಿಳಿ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: 2 ಪೇತ್ರ 1:16–19
9“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. 10ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು. 13ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. 14ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ಪ್ರತಿವಚನ ಕೀರ್ತನೆ
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. 5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
ಸುವಾರ್ತೆ
2ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು. 3ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು. 4ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು. 5ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು. 6ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು. 7ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು. 8ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. 9ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು