ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 6 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಜುಲೈ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಆಗಸ್ಟ್ 2027
ಶುಕ್ರವಾರ · ಪಂಚಾಶತ್ತಮದ ನಂತರದ ಏಳನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Martyr Christina of Tyre († c. 300)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
9ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ. 10ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. 11ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 12ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು. 13ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು. 14ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
12ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. 14ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. 16ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
ಪತ್ರಿಕೆ
35ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ. 36ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ. 37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು. 38ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ. 39ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು. 40ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ. 8:1ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ. 2ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ. 3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ. 4ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು. 5ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ, 6“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.” 7ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
ಪತ್ರಿಕೆ (ಸಂತರಾದ ಬೋರಿಸ್ ಮತ್ತು ಗ್ಲೆಬ್)
28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. 29ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. 30ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು. 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? 33ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. 34ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? 35ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? 36“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. 37ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. 38ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, 39ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ಸುವಾರ್ತೆ
29ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು. 30ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು. 31ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
ಸುವಾರ್ತೆ (ಸಂತರಾದ ಬೋರಿಸ್ ಮತ್ತು ಗ್ಲೆಬ್)
17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. 18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು. 22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ. 23ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ 25‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ. 16:1“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. 2ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಜುಲೈ ಎಂದರೆ ನಾಗರಿಕ ಪಂಚಾಂಗದ 6 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು