Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 7 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಆಗಸ್ಟ್ 2027

ಶನಿವಾರ · ಸಾಮಾನ್ಯ ಕಾಲದ 18ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 18ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಕಾಜೆಟನ್, ಧರ್ಮಗುರು · ಐಚ್ಛಿಕ ಸ್ಮರಣೆ

ಸಂತ ಸಿಕ್ಸ್ಟಸ್ II, ಪೋಪ್, ಮತ್ತು ಸಂಗಡಿಗರು, ಹುತಾತ್ಮರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಧರ್ಮೋ 6:4–13

4ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು; 5ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. 6ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. 7ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. 8ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು. 9ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು. 10ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ 11ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ, 12ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ. 13ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ಪ್ರತಿವಚನ ಕೀರ್ತನೆ

ಕೀರ್ತ 18:1–3, 46, 50

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. 2ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. 3ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. 46ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ. 50ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಸುವಾರ್ತೆ

ಮತ್ತಾ 17:14–20

14ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ, 15“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. 16ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು. 17ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು. 18ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು. 19ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?” 20ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು