ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 7 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಜುಲೈ 25 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಆಗಸ್ಟ್ 2027
ಶನಿವಾರ · ಪಂಚಾಶತ್ತಮದ ನಂತರದ ಏಳನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Dormition of the Righteous Anna, Mother of the Most Holy Theotokos
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. 2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. 3ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
ಪತ್ರಿಕೆ (ಸಂತ ಅನ್ನ)
22ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. 23ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. 24ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. 25ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ. 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ. 27“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ. 28ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. 29ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ. 30ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ. 31ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.
ಸುವಾರ್ತೆ
37ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. 38ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. 39ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 40“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ. 41ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು. 42ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. 11:1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
ಸುವಾರ್ತೆ (ಸಂತ ಅನ್ನ)
16“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು. 18ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು. 19ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. 20ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ, 21ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 25 ಜುಲೈ ಎಂದರೆ ನಾಗರಿಕ ಪಂಚಾಂಗದ 7 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು