Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 8 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಆಗಸ್ಟ್ 2027

ಭಾನುವಾರ · ಸಾಮಾನ್ಯ ಕಾಲದ 19ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 19ನೇ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

1 ಅರಸು 19:4–8

4ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು. 5ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು. 6ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು. 7ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು. 8ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ

ಪ್ರತಿವಚನ ಕೀರ್ತನೆ

ಕೀರ್ತ 34:1–8

1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 7ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಎರಡನೆಯ ವಾಚನ

ಎಫೆ 4:30–5:2

30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. 31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ. 5:1ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಸುವಾರ್ತೆ

ಯೋಹಾ 6:41–51

41ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ, 42“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು. 43ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು. 44“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. 45‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ. 46ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು. 47ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. 48ನಾನೇ ಜೀವದ ರೊಟ್ಟಿ 49ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು. 50ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ. 51ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು