ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 9 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಆಗಸ್ಟ್ 2027
ಸೋಮವಾರ · ಸಾಮಾನ್ಯ ಕಾಲದ 19ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 19ನೇ ವಾರದ ಸೋಮವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶಿಲುಬೆಯ ಸಂತ ತೆರೇಸಾ ಬೆನೆಡಿಕ್ಟಾ (ಎಡಿತ್ ಸ್ಟೈನ್), ಕನ್ಯೆ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
12ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, 13ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು 14ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ. 15ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು. 16ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ. 17ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ. 18ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ. 19ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ. 20ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. 21ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ. 22ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.
ಪ್ರತಿವಚನ ಕೀರ್ತನೆ
12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. 14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. 15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ. 19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ. 20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
ಸುವಾರ್ತೆ
22ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು. 23ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು. 24ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. 25ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. 26ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. 27ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
ಇಂದಿನ ಸಂತರು
- ಶಿಲುಬೆಯ ಸಂತ ತೆರೇಸಾ ಬೆನೆಡಿಕ್ಟಾ (ಎಡಿತ್ ಸ್ಟೈನ್), ಕನ್ಯೆ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು