Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 10 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ಆಗಸ್ಟ್ 2027

ಮಂಗಳವಾರ · ಸಾಮಾನ್ಯ ಕಾಲದ 19ನೇ ವಾರ

ಹಬ್ಬಗಳು ಮತ್ತು ಸಂತರು

ಸಂತ ಲಾರೆನ್ಸ್, ಧರ್ಮಸೇವಕ ಮತ್ತು ಹುತಾತ್ಮ

ಹಬ್ಬ · ಆರಾಧನಾ ಬಣ್ಣ: ಕೆಂಪು

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 9:6–10

6ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. 7ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. 8ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. 9“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” 10ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಪ್ರತಿವಚನ ಕೀರ್ತನೆ

ಕೀರ್ತ 112:1–2, 5–9

1ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 5ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

ಸುವಾರ್ತೆ

ಯೋಹಾ 12:24–26

24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು 25ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. 26ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು