ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 10 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಜುಲೈ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಆಗಸ್ಟ್ 2027
ಮಂಗಳವಾರ · ಪಂಚಾಶತ್ತಮದ ನಂತರದ ಎಂಟನೆಯ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Apostles of the 70 and Deacons: Prochorus, Nicanor, Timon and Parmenas (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
5ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು. 6ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. 7ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ. 8ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ. 9ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. 10ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ. 11ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. 12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
ಸುವಾರ್ತೆ
6ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು. 7ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 8ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ? 9ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ? 10ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ? 11ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು. 12ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಜುಲೈ ಎಂದರೆ ನಾಗರಿಕ ಪಂಚಾಂಗದ 10 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು