ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 12 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಜುಲೈ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಆಗಸ್ಟ್ 2027
ಗುರುವಾರ · ಪಂಚಾಶತ್ತಮದ ನಂತರದ ಎಂಟನೆಯ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Holy Apostles of the 70: Silas and Sylvanus, and those with them: Criscentus, Epenetus and Andronicus (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
28ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ. 29ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? 30ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು? 31ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ. 32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. 33ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ. 11:1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ. 2ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ. 3ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ. 4ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ. 5ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ. 6ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ. 7ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.
ಸುವಾರ್ತೆ
24ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 25ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 26ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು? 27ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು. 28“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಜುಲೈ ಎಂದರೆ ನಾಗರಿಕ ಪಂಚಾಂಗದ 12 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು