ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 14 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಆಗಸ್ಟ್ 2027
ಶನಿವಾರ · ಸಾಮಾನ್ಯ ಕಾಲದ 19ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 19ನೇ ವಾರದ ಶನಿವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಮ್ಯಾಕ್ಸಿಮಿಲಿಯನ್ ಮೇರಿ ಕೋಲ್ಬೆ, ಧರ್ಮಗುರು ಮತ್ತು ಹುತಾತ್ಮ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
14ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ. 15ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು. 16ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ. 17ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ. 18ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು. 19ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ. 20ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು. 21ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು. 22ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು 23ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು. 24ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು. 25ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು. 26ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ, 27ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ 28ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು. 29ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.
ಪ್ರತಿವಚನ ಕೀರ್ತನೆ
1ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. 2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. 5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. 8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಸುವಾರ್ತೆ
13ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು. 14ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು. 15ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
ಇಂದಿನ ಸಂತರು
- ಸಂತ ಮ್ಯಾಕ್ಸಿಮಿಲಿಯನ್ ಮೇರಿ ಕೋಲ್ಬೆ, ಧರ್ಮಗುರು ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು