ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 15 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 2 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಆಗಸ್ಟ್ 2027
ಭಾನುವಾರ · ಸ್ವರ 7
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ ಎಂಟನೆಯ ಭಾನುವಾರ
ದೇವಮಾತೆಯ ನಿದ್ರಾಗಮನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಎಂಟನೆಯ ಸುವಾರ್ತೆ
11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, 12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. 13ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು. 14ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ. 15ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು. 16ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ. 17ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು. 18ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
ಪತ್ರಿಕೆ
10ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ. 11ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು. 12ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. 13ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ? 14ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ. 15ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ. 16ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ. 17ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ. 18ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
ಸುವಾರ್ತೆ
14ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. 15ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು. 16ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು. 17ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ, 18ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು. 19ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. 20ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. 21ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು. 22ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 15 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು